ಎಜ್ರ 7:23 - ಕನ್ನಡ ಸಮಕಾಲಿಕ ಅನುವಾದ23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವ ಕೋಪವುಂಟಾಗದ ಹಾಗೆ, ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಶ್ರದ್ಧೆಯಿಂದ ಒದಗಿಸಿಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿ |