Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:24 - ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ, ಆ ದೇವಾಲಯದ ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ, ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಆ ದೇವಾಲಯದ ಯಾಜಕ ಲೇವಿಯ ಗಾಯಕ ದ್ವಾರಪಾಲಕ ದಾಸ ಮುಂತಾದ ಸೇವಕರಲ್ಲಿ ಯಾವನಿಂದಾದರೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬದಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:24
8 ತಿಳಿವುಗಳ ಹೋಲಿಕೆ  

ಅವನ ಸಂಗಡ ಇಸ್ರಾಯೇಲರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ದೇವಾಲಯದ ಸೇವಕರಲ್ಲಿಯೂ ಕೆಲವರು ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಹೋದರು.


ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಇನ್ನು ಕೆಲವರು, “ಅರಸನಿಗೆ ತೆರಿಗೆಯನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ, ನಮ್ಮ ದ್ರಾಕ್ಷಿತೋಟಗಳ ಮೇಲೆಯೂ ಸಾಲವನ್ನು ತೆಗೆದುಕೊಳ್ಳಬೇಕಾಯಿತು.


ಯಾಜಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಫರೋಹನು ಯಾಜಕರಿಗೆ ಭತ್ಯೆಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು, ಅವರು ಊಟಮಾಡುತ್ತಿದ್ದರು. ಆದ್ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.


ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು