Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:25 - ಕನ್ನಡ ಸಮಕಾಲಿಕ ಅನುವಾದ

25 “ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇವಿುಸು. ಅವರು ಹೊಳೆಯಾಚೆಯ ಇಸ್ರಾಯೇಲ್ಯರಲ್ಲಿ ನಿನ್ನ ದೇವರ ಧರ್ಮವನ್ನರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:25
30 ತಿಳಿವುಗಳ ಹೋಲಿಕೆ  

ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು.


ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.


ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ಅವರು ತಮ್ಮ ಸ್ಥಳಗಳಲ್ಲಿ ನಿಂತು ಮೂರು ತಾಸುಗಳು ತಮ್ಮ ದೇವರಾಗಿರುವ ಯೆಹೋವ ದೇವರ ನಿಯಮದ ಗ್ರಂಥವನ್ನು ಓದಿದರು. ಮತ್ತೊಂದು ಮೂರು ತಾಸುಗಳು ತಮ್ಮ ಪಾಪಗಳನ್ನು ಅರಿಕೆಮಾಡಿ, ತಮ್ಮ ದೇವರಾಗಿರುವ ಯೆಹೋವ ದೇವರನ್ನು ಆರಾಧಿಸಿದರು.


ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ನಿಯಮ ಗ್ರಂಥಕ್ಕೆ ಅನುಗುಣವಾಗಿ ಇದೆಯೋ, ಇಲ್ಲವೋ ವಿಮರ್ಶೆ ಮಾಡಬೇಕು.


ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ.


ದಾವೀದನು ಹೇಳಿದ್ದೇನೆಂದರೆ, “ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಯೆಹೋವ ದೇವರ ಮನೆಯ ಕೆಲಸವನ್ನು ನಡಿಸುವವರಾಗಿದ್ದರು. ಮತ್ತು ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿಪತಿಗಳೂ ಆಗಿದ್ದರು.


ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.


ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.


ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.


ಆಗ ಅಸ್ಸೀರಿಯದ ಅರಸನು, “ನೀವು ಅಲ್ಲಿಂದ ತೆಗೆದುಕೊಂಡು ಬಂದ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ. ಅವನು ಅಲ್ಲಿ ವಾಸವಾಗಿರಲಿ. ಅವನೇ ಅವರಿಗೆ ಆ ದೇಶದ ದೇವರು ಅಪೇಕ್ಷಿಸುವುದನ್ನು ಬೋಧಿಸಲಿ,” ಎಂದು ಆಜ್ಞಾಪಿಸಿದನು.


ನೀನು ಏಳು, ಏಕೆಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ನಿಲ್ಲುತ್ತೇವೆ. ಧೈರ್ಯದಿಂದ ಅದನ್ನು ಮಾಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು