ಎಜ್ರ 7:27 - ಕನ್ನಡ ಸಮಕಾಲಿಕ ಅನುವಾದ27 ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 [ಎಜ್ರನು ಹೇಳಿದ್ದು - ] ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯವನ್ನು ಶೋಭಿಸುವ ಸ್ಥಿತಿಗೆ ತರುವದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸು ಮಾಡಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿ |
ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.