Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:28 - ಕನ್ನಡ ಸಮಕಾಲಿಕ ಅನುವಾದ

28 ಅರಸನ ಮುಂದೆಯೂ, ಅವನ ಸಲಹೆಗಾರರ ಮುಂದೆಯೂ, ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆತೋರಿಸಿದ್ದಾರೆ. ಹೀಗೆಯೇ ನನ್ನ ದೇವರಾಗಿರುವ ಯೆಹೋವ ದೇವರ ಹಸ್ತವು ನನ್ನ ಮೇಲೆ ಇದ್ದುದರಿಂದ, ನಾನು ಧೈರ್ಯಗೊಂಡು ಇಸ್ರಾಯೇಲಿನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲ ವಿಶಿಷ್ಟ ಪದಾಧಿಕಾರಿಗಳ ಮುಂದೆ ನನಗೆ ದೇವರು ದಯೆತೋರಿಸಿದ್ದಾರೆ. ನನ್ನ ದೇವರಾದ ಸರ್ವೇಶ್ವರನ ಕೃಪಾಹಸ್ತ ನನ್ನ ಮೇಲಿದ್ದುದರಿಂದಲೇ ನಾನು ಧೈರ್ಯ ತಂದುಕೊಂಡು, ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವುಮಂದಿ ಇಸ್ರಯೇಲ್ ಮುಖಂಡರನ್ನು ಒಂದುಗೂಡಿಸಿಕೊಂಡೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನಗೆ ದೊರಕಿದ್ದರಿಂದ ನಾನು ಧೈರ್ಯತಂದುಕೊಂಡು ನನ್ನೊಂದಿಗೆ ಪ್ರಯಾಣ ಮಾಡುವದಕ್ಕೆ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:28
15 ತಿಳಿವುಗಳ ಹೋಲಿಕೆ  

ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ.


ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.


ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ,


ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವವರೆಗೂ, ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಉತ್ತರವನ್ನು ಪತ್ರದಲ್ಲಿ ಕಳುಹಿಸಿದರು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ನಿಯಮ ಗ್ರಂಥಕ್ಕೆ ಅನುಗುಣವಾಗಿ ಇದೆಯೋ, ಇಲ್ಲವೋ ವಿಮರ್ಶೆ ಮಾಡಬೇಕು.


ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು.


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.


ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ:


ಅವನಿಗೆ ದಯೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ದಿಕ್ಕಿಲ್ಲದ ಅವನ ಮಕ್ಕಳನ್ನು ಯಾವನೂ ಕನಿಕರಿಸದಿರಲಿ.


ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು