ಎಜ್ರ 7:6 - ಕನ್ನಡ ಸಮಕಾಲಿಕ ಅನುವಾದ6 ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿ |
ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.