Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:8 - ಕನ್ನಡ ಸಮಕಾಲಿಕ ಅನುವಾದ

8 ಅರಸನ ಏಳನೆಯ ವರ್ಷದ, ಐದನೆಯ ತಿಂಗಳಲ್ಲಿ ಎಜ್ರನು ಯೆರೂಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ತಲುಪಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಜೆರುಸಲೇಮನ್ನು ಮುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಜ್ರನು ಆ ಅರಸನ ಆಳಿಕೆಯ ಏಳನೆಯ ವರುಷದಲ್ಲಿ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ಮುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಎಜ್ರನು ಜೆರುಸಲೇಮನ್ನು ತಲುಪಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:8
7 ತಿಳಿವುಗಳ ಹೋಲಿಕೆ  

ಅವನ ಸಂಗಡ ಇಸ್ರಾಯೇಲರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ದೇವಾಲಯದ ಸೇವಕರಲ್ಲಿಯೂ ಕೆಲವರು ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಹೋದರು.


ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು.


ನಾವು ಯೆರೂಸಲೇಮಿಗೆ ಬಂದು, ಅಲ್ಲಿ ಮೂರು ದಿವಸ ವಿಶ್ರಮಿಸಿಕೊಂಡೆವು.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ.


ಆಗ ಯೆಹೂದ ಮತ್ತು ಬೆನ್ಯಾಮೀನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿದರು. ಅದು ಒಂಬತ್ತನೆಯ ತಿಂಗಳ, ಇಪ್ಪತ್ತನೆಯ ದಿವಸವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೋಸ್ಕರವೂ, ಮಳೆಗೋಸ್ಕರವೂ ನಡುಗಿ ಕುಳಿತುಕೊಂಡಿದ್ದರು.


ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು