ಎಜ್ರ 8:15 - ಕನ್ನಡ ಸಮಕಾಲಿಕ ಅನುವಾದ15 ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಒಂದುಗೂಡಿಸಿದೆ. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ನನ್ನೊಡನೆ ಜನಸಾಮಾನ್ಯರು ಹಾಗು ಯಾಜಕರು ಬಂದಿದ್ದರಾದರೂ ಲೇವಿಯರಲ್ಲಿ ಯಾರೂ ಬರದೆ ಇದ್ದುದು ಕಂಡುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಹವಾ ಪ್ರಾಂತದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ಸಾಧಾರಣಜನರೂ ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ. ಅಧ್ಯಾಯವನ್ನು ನೋಡಿ |