Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:21 - ಕನ್ನಡ ಸಮಕಾಲಿಕ ಅನುವಾದ

21 ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ - ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೇಳಿಕೊಳ್ಳಬೇಕೆಂದು ಪ್ರಕಟಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:21
37 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.


ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.


ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.


“ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.


ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.


ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಯೆಹೋವ ದೇವರೇ, ನನ್ನ ವಿರೋಧಿಗಳ ನಿಮಿತ್ತ ನಿಮ್ಮ ನೀತಿಯಲ್ಲಿ ನನ್ನನ್ನು ನಡೆಸಿರಿ; ನಿಮ್ಮ ಮಾರ್ಗವನ್ನು ನನ್ನ ಮುಂದೆ ನೇರವಾಗಿ ಮಾಡಿರಿ.


ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.


ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.


ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ ಉಪವಾಸ ಎನ್ನುತ್ತೀರೋ?


‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.


ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.


ಇದೇ ನಿಮಗೆ ಸಬ್ಬತ್ ದಿನವಾಗಿರುವುದು. ನಿಮಗೆ ನಿತ್ಯವಾದ ನಿಯಮವಿರುವಂತೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.


ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.


ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು.


ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?


ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.


ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ.


ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.


ನಾವು ನಡೆಯತಕ್ಕ ಮಾರ್ಗವನ್ನೂ, ನಾವು ಮಾಡತಕ್ಕ ಕಾರ್ಯವನ್ನೂ ನಿನ್ನ ದೇವರಾದ ಯೆಹೋವ ದೇವರು ನಮಗೆ ತಿಳಿಸುವ ಹಾಗೆ, ನಿನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡು,” ಎಂದರು.


ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು