Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:22 - ಕನ್ನಡ ಸಮಕಾಲಿಕ ಅನುವಾದ

22 “ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಮ್ಮ ದೇವರ ಕೃಪಾಹಸ್ತ ಅವರ ಎಲ್ಲ ಶರಣಾರ್ಥಿಗಳ ಮೇಲಿತ್ತು. ನಮ್ಮ ದೇವರನ್ನು ತೊರೆದುಬಿಟ್ಟವರೆಲ್ಲರು ಅವರ ಪ್ರಬಲವಾದ ರೌದ್ರಕ್ಕೆ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದೆವು. ಆದುದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಸೈನ್ಯವನ್ನಾಗಲಿ, ಅಶ್ವಬಲವನ್ನಾಗಲಿ ಕೇಳಿಕೊಳ್ಳುವುದಕ್ಕೆ ನಾನು ನಾಚಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವದು; ಆತನ ಬಲವಾದ ರೌದ್ರಕ್ಕೆ ಆತನನ್ನು ತೊರೆದುಬಿಟ್ಟವರೆಲ್ಲರೂ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೇಳಿಕೊಳ್ಳುವದಕ್ಕೆ ನಾಚಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:22
24 ತಿಳಿವುಗಳ ಹೋಲಿಕೆ  

ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ?


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಆತನನ್ನು ನಿರೀಕ್ಷಿಸುವವರಿಗೂ, ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ.


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ; ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ.


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ಅರಸನ ಮುಂದೆಯೂ, ಅವನ ಸಲಹೆಗಾರರ ಮುಂದೆಯೂ, ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆತೋರಿಸಿದ್ದಾರೆ. ಹೀಗೆಯೇ ನನ್ನ ದೇವರಾಗಿರುವ ಯೆಹೋವ ದೇವರ ಹಸ್ತವು ನನ್ನ ಮೇಲೆ ಇದ್ದುದರಿಂದ, ನಾನು ಧೈರ್ಯಗೊಂಡು ಇಸ್ರಾಯೇಲಿನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು,” ಎಂದನು.


ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.


ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು.


ನಿಮ್ಮ ವಿಷಯವಾಗಿ ನಾನು ತೀತನ ಮುಂದೆ ಹೊಗಳಿದ್ದಕ್ಕೆ ನಾನು ಬೇಸರಪಡಬೇಕಾಗಿರಲಿಲ್ಲ. ನಾನು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ನಿಮ್ಮ ಬಗ್ಗೆ ನಾವು ತೀತನ ಬಗ್ಗೆ ಹೊಗಳಿದ್ದೆಲ್ಲವೂ ಸತ್ಯವಾದವು.


ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು.


ನಿಮ್ಮ ಕೋಪದ ಶಕ್ತಿಯನ್ನು ತಿಳಿದವರ‍್ಯಾರು? ನಿಮ್ಮ ಮೇಲಿನ ಭಯಭಕ್ತಿಗೆ ಕಾರಣವಾಗಿರುವ ನಿಮ್ಮ ಖಂಡನೆಯನ್ನು ಗ್ರಹಿಸುವವರ‍್ಯಾರು?


“ಯೆಹೋವ ದೇವರ ಸರ್ವ ಸಮೂಹವು ಹೇಳುವುದೇನೆಂದರೆ: ‘ನೀವು ಈ ಹೊತ್ತು ಯೆಹೋವ ದೇವರ ಕಡೆಗೆ ತಿರುಗದೆ, ಅವರಿಗೆ ವಿರೋಧವಾಗಿ ತಿರುಗಿಬೀಳುವ ಹಾಗೆ ನಿಮಗೆ ಒಂದು ಬಲಿಪೀಠವನ್ನು ಕಟ್ಟಿಕೊಂಡು, ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?


ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.


ಆಗ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು, ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ, ಕುದುರೆ ಸವಾರರನ್ನೂ ಕಳುಹಿಸಿದನು.


ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು