Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:25 - ಕನ್ನಡ ಸಮಕಾಲಿಕ ಅನುವಾದ

25 ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅರಸನಿಂದಲು, ಅವನ ಮಂತ್ರಿಗಳಿಂದಲು, ಪದಾಧಿಕಾರಿಗಳಿಂದಲು, ಅಲ್ಲಿದ್ದ ಎಲ್ಲ ಇಸ್ರಯೇಲರಿಂದಲು ನಮ್ಮ ದೇವರ ಆಲಯಕ್ಕೆ ಕಾಣಿಕೆಯಾಗಿ ಕೊಡಲಾಗಿದ್ದ ಬೆಳ್ಳಿಬಂಗಾರವನ್ನು ಹಾಗು ಸಾಮಾಗ್ರಿಗಳನ್ನು ತೂಕಮಾಡಿ ಅವರಿಗೆ ಒಪ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅರಸನಿಂದಲೂ ಅವನ ಮಂತ್ರಿಗಳಿಂದಲೂ ಸರದಾರರಿಂದಲೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿಬಂಗಾರವನ್ನೂ ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವಾಲಯಕ್ಕೆ ಕೊಟ್ಟಿರುವ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಸ್ತುಗಳನ್ನು ನಾನು ತೂಗಿ ಆರಿಸಲ್ಪಟ್ಟಿದ್ದ ಹನ್ನೆರಡು ಮಂದಿಗೆ ಕೊಟ್ಟೆನು. ಅವುಗಳನ್ನು ಅರ್ತಷಸ್ತ ರಾಜನೂ ಅವನ ಸಲಹೆಗಾರರೂ ಉನ್ನತಾಧಿಕಾರಿಗಳೂ ಅಲ್ಲದೆ ಬಾಬಿಲೋನಿನಲ್ಲಿದ್ದ ಎಲ್ಲಾ ಇಸ್ರೇಲರು ದೇವಾಲಯಕ್ಕಾಗಿ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:25
7 ತಿಳಿವುಗಳ ಹೋಲಿಕೆ  

ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು.


ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸಕ್ಕಾಗಿ ಬೊಕ್ಕಸಕ್ಕೆ 400 ಕಿಲೋಗ್ರಾಂ ಬಂಗಾರವನ್ನೂ, 2,800 ಕಿಲೋಗ್ರಾಂ ಬೆಳ್ಳಿಯನ್ನೂ, ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.


ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು 130 ಶೆಕೆಲ್, ಒಂದೊಂದು ಬಟ್ಟಲಿನ ತೂಕವು 70 ಶೆಕೆಲ್. ಬೆಳ್ಳಿಯ ಎಲ್ಲಾ ಸಾಮಗ್ರಿಗಳ ತೂಕ ಪರಿಶುದ್ಧಸ್ಥಳದ ನೇಮದ ಪ್ರಕಾರ 2,400 ಶೆಕೆಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು