Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:29 - ಕನ್ನಡ ಸಮಕಾಲಿಕ ಅನುವಾದ

29 ನೀವು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ, ಪ್ರಧಾನರ ಮುಂದೆಯೂ ಇಸ್ರಾಯೇಲ್ ಕುಟುಂಬಗಳ ಪ್ರಧಾನರ ಮುಂದೆಯೂ ತೂಕಮಾಡುವವರೆಗೆ ಜಾಗ್ರತೆಯಾಗಿ ಕಾಪಾಡಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದುದರಿಂದ ನೀವು ಜಾಗರೂಕರಾಗಿ ಇದ್ದು ಜೆರುಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಮುಖ್ಯಸ್ಥರ ಮುಂದೆ ಹಾಗು ಇಸ್ರಯೇಲ್ ಗೋತ್ರಪ್ರಧಾನರ ಮುಂದೆ ಇವುಗಳನ್ನು ತೂಕಮಾಡಿ ಸರ್ವೇಶ್ವರನ ಆಲಯದ ಕೊಠಡಿಗಳಲ್ಲಿಡುವವರೆಗೂ ಎಚ್ಚರಿಕೆಯಿಂದ ನೋಡಿಕೊಳ್ಳಿ’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇವಿುನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಗೋತ್ರಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿಡುವವರೆಗೂ ಕಾಯಿರಿ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದ್ದರಿಂದ ಭದ್ರವಾಗಿ ಇಟ್ಟುಕೊಳ್ಳಿರಿ. ಜೆರುಸಲೇಮಿನಲ್ಲಿರುವ ದೇವಾಲಯದ ಅಧಿಕಾರಿಗಳಿಗೆ, ಲೇವಿಯರಿಗೆ ಮತ್ತು ಇಸ್ರೇಲ್ ಕುಲಪ್ರಧಾನರಿಗೆ ಇವುಗಳನ್ನು ತಲುಪಿಸುವ ತನಕ ನೀವು ಇದಕ್ಕೆ ಜವಾಬ್ದಾರರಾಗಿದ್ದೀರಿ. ಅವರು ಇವುಗಳನ್ನು ತೂಗಿ ದೇವಾಲಯದ ಕೋಣೆಯಲ್ಲಿ ಭದ್ರವಾಗಿಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:29
5 ತಿಳಿವುಗಳ ಹೋಲಿಕೆ  

ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು