Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:10 - ಕನ್ನಡ ಸಮಕಾಲಿಕ ಅನುವಾದ

10 “ಆದರೆ ಈಗ ನಮ್ಮ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ನಿಮ್ಮ ಆಜ್ಞೆಗಳನ್ನು ನಾವು ತೊರೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಷ್ಟು ಉಪಕಾರವನ್ನು ಪಡೆದ ನಾವು ಬೇರೆ ಏನನ್ನು ತಾನೆ ಅರಿಕೆಮಾಡಿಕೊಳ್ಳೋಣ! ನಮ್ಮ ದೇವರೇ, ನಿಮ್ಮ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ, ಅಕಟಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆ ಮಾಡಿಕೊಳ್ಳೋಣ! ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವಕಟಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ದೇವರೇ, ಈಗ ನಾವು ನಿನಗೆ ಏನು ಹೇಳೋಣ? ನಾವು ನಿನಗೆ ವಿಧೇಯರಾಗುವುದನ್ನು ನಿಲ್ಲಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:10
10 ತಿಳಿವುಗಳ ಹೋಲಿಕೆ  

ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.


ಯೆಹೋವ ದೇವರೇ, ಈಗ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದರಲ್ಲಾ. ನಾನು ಏನು ಹೇಳಲಿ.


ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ.


ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನೀವು ಆ ನಿಮ್ಮ ಆಜ್ಞೆಗಳನ್ನು ಕೊಟ್ಟಿದ್ದೀರಿ. ‘ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು, ಆ ದೇಶಗಳ ಜನರ ಅಶುದ್ಧತ್ವದಿಂದ ಮೈಲಿಗೆಯಾದ ದೇಶವಾಗಿದೆ. ಆ ಜನರು ತಮ್ಮ ಅಸಹ್ಯ ಅಭ್ಯಾಸಗಳಿಂದ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯವರೆಗೂ ತುಂಬಿಸಿದ್ದಾರೆ.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು.


ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು