ಎಜ್ರ 9:14 - ಕನ್ನಡ ಸಮಕಾಲಿಕ ಅನುವಾದ14 ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗಿರುವಲ್ಲಿ, ನಾವು ಪುನಃ ನಿಮ್ಮ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ವಿವಾಹ ಸಂಬಂಧ ಬೆಳೆಸುವುದು ಯೋಗ್ಯವೇ? ಹಾಗೆ ಮಾಡಿದರೆ, ನೀವು ನಮ್ಮ ಮೇಲೆ ರೌದ್ರಾವೇಶವುಳ್ಳವರಾಗಿ, ಯಾರೂ ತಪ್ಪಿಸಿಕೊಳ್ಳದಂತೆ ನಮ್ಮನ್ನು ಮುಗಿಸಿಬಿಡುವಿರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು. ಅಧ್ಯಾಯವನ್ನು ನೋಡಿ |
ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”