Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:8 - ಕನ್ನಡ ಸಮಕಾಲಿಕ ಅನುವಾದ

8 “ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ‌, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವವನ್ನು ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:8
36 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಿಮ್ಮ ಜನರು ನಿಮ್ಮಲ್ಲಿ ಸಂತೋಷಪಡುವಂತೆ ನೀವು ತಿರುಗಿ ನಮ್ಮನ್ನು ಉಜ್ಜೀವಿಸುವುದಿಲ್ಲವೋ?


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


ಆ ಕುಲದಿಂದಲೇ ಮೂಲೆಗಲ್ಲೂ, ಗುಡಾರದ ಮೊಳೆಯೂ, ಯುದ್ಧದ ಬಿಲ್ಲೂ, ಸಕಲ ಅಧಿಕಾರಿಗಳೂ ಕೂಡಿಕೊಂಡು ಹೊರಬರುವರು.


ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇದು ಈ ದಿವಸಗಳಲ್ಲಿ ಉಳಿದ ಈ ಜನರ ದೃಷ್ಟಿಗೆ ಆಶ್ಚರ್ಯವಾಗಿ ತೋರಿದರೂ, ನನ್ನ ಕಣ್ಣುಗಳಿಗೆ ಸಹ ಆಶ್ಚರ್ಯವಾಗಿ ತೋರುವುದೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.


ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.


ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,


ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.


ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ.


ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು; ಅಂಥವರ ಮುಖಗಳು ನಾಚಿಕೆಯಿಂದ ಕುಂದಿಹೋಗುವುದಿಲ್ಲ.


ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಬಂದು, ಜೀವ ಬೆಳಕನ್ನು ಅನುಭವಿಸುವಂತೆಯೇ ದೇವರು ಹೀಗೆ ಮಾಡುವರು.


ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು.


ಅದಕ್ಕೆ ಯೋನಾತಾನನು, “ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿದ್ದಾನೆ. ನಾನು ಈ ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ, ನನ್ನ ಕಣ್ಣುಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.


ಆದರೆ ಯೋನಾತಾನನು ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಕೇಳದೆ ಇದ್ದ ಕಾರಣ, ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ, ಅದನ್ನು ಜೇನು ತೊಟ್ಟಿಯಲ್ಲಿ ಅದ್ದಿ, ತನ್ನ ಬಾಯಿಗೆ ಹಾಕಿಕೊಂಡನು. ಅದರಿಂದ ಅವನ ಕಣ್ಣುಗಳು ಕಳೆಯನ್ನು ಹೊಂದಿದವು.


ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ.


ಯೆಹೋವ ದೇವರು ನಿಮ್ಮ ಸಂಕಟದಿಂದಲೂ, ಕಳವಳದಿಂದಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ


“ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು