Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:9 - ಕನ್ನಡ ಸಮಕಾಲಿಕ ಅನುವಾದ

9 ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:9
25 ತಿಳಿವುಗಳ ಹೋಲಿಕೆ  

ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


“ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’


ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.


ಅರಸನ ಏಳನೆಯ ವರ್ಷದ, ಐದನೆಯ ತಿಂಗಳಲ್ಲಿ ಎಜ್ರನು ಯೆರೂಸಲೇಮಿಗೆ ಬಂದನು.


“ಆದರೆ ಈಗ ನಮ್ಮ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ನಿಮ್ಮ ಆಜ್ಞೆಗಳನ್ನು ನಾವು ತೊರೆದಿದ್ದೇವೆ.


ಅವನಿಗೆ ದಯೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ದಿಕ್ಕಿಲ್ಲದ ಅವನ ಮಕ್ಕಳನ್ನು ಯಾವನೂ ಕನಿಕರಿಸದಿರಲಿ.


ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ.


ಯೆಹೋವ ದೇವರು ನಿಮ್ಮ ಸಂಕಟದಿಂದಲೂ, ಕಳವಳದಿಂದಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ


ಅವರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದ ತರುವಾಯ, ಕುಟುಂಬಗಳ ಕೆಲವು ಮುಖ್ಯಸ್ಥರು ದೇವರ ಆಲಯವನ್ನು ಅದರ ಸ್ಥಳದಲ್ಲಿ ಕಟ್ಟುವುದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ, ಮುಂಚೆ ಹಾಳುಬಿದ್ದವುಗಳನ್ನು ಎಬ್ಬಿಸುವರು. ಅನೇಕ ತಲಾಂತರಗಳಿಂದ ಹಾಳಾದ ಪಟ್ಟಣಗಳನ್ನೂ, ನೂತನ ಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು