Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:21 - ಕನ್ನಡ ಸಮಕಾಲಿಕ ಅನುವಾದ

21 ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕ್ರಿಸ್ತ್ ಸರ್ಗಾತ್ಲ್ಯಾ ಸಗ್ಳ್ಯಾ ಮೊಟೆಪಾನಾಂಚ್ಯಾ, ಅಧಿಕಾರಿಯಾಂಚ್ಯಾ, ಪದ್ವಿಚ್ಯಾ ಅನಿ ಧನಿಯಾಂಚ್ಯಾ ವೈರ್ ಅಧಿಕಾರ್ ಚಾಲ್ವುತಾ; ಹ್ಯಾ ಜಗಾತ್ಲ್ಯಾ ಅನಿ ಫಿಡೆ ಯೆತಲ್ಯಾ ಸಗ್ಳ್ಯಾ ಅಧಿಕಾರಾಂಚ್ಯಾ ವೈರ್ ಮೊಟೆ ನಾವ್ ತೆಕಾ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:21
20 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.


ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ.


ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ.


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು