Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:22 - ಕನ್ನಡ ಸಮಕಾಲಿಕ ಅನುವಾದ

22 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಪ್ರತಿಯೊಂದನ್ನು ಕ್ರಿಸ್ತನ ಅಧಿಕಾರಕ್ಕೆ ಒಳಪಡಿಸಿದನು. ಸಭೆಗೋಸ್ಕರವಾಗಿ ದೇವರು ಆತನನ್ನು ಪ್ರತಿಯೊಂದರ ಮೇಲೆ ಶಿರಸ್ಸನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ದೆವಾನ್ ಹರ್ ಲೊಕಾಂಚ್ಯಾ ಕ್ರಿಸ್ತಾಚ್ಯಾ ಅಧಿಕಾರಾಚ್ಯಾ ಖಾಯ್ಲ್ ಭುತ್ತುರ್ ಕರ್ಲ್ಯಾನ್, ಅನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾ ಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:22
18 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.


ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.


ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?” ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ.


ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.


ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ.


ಪ್ರತಿ ಪುರುಷನಿಗೂ ಕ್ರಿಸ್ತನು ಶಿರಸ್ಸು, ಸ್ತ್ರೀಗೆ ಪುರುಷನು ಶಿರಸ್ಸು ಮತ್ತು ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾರೆ, ಎಂಬುದನ್ನು ನೀವು ತಿಳಿಯಬೇಕೆಂಬುದು ನನ್ನ ಅಪೇಕ್ಷೆ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.


ಪವಿತ್ರಾತ್ಮರಿಂದ ನೀವು ಹೊಂದಿರುವ ಪ್ರೀತಿಯನ್ನು ನಮಗೆ ತಿಳಿಸಿದವನೂ ಅವನೇ.


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು