Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:23 - ಕನ್ನಡ ಸಮಕಾಲಿಕ ಅನುವಾದ

23 ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಭೆಯು ಆತನ ದೇಹವಾಗಿದೆ; ಎಲ್ಲವನ್ನೂ ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸಭೆಯು ಕ್ರಿಸ್ತನ ದೇಹವಾಗಿದೆ. ಸಭೆಯು ಕ್ರಿಸ್ತನಿಂದ ಆವರಿಸಲ್ಪಟ್ಟಿದೆ. ಆತನು ಸಮಸ್ತವನ್ನು ಪ್ರತಿಯೊಂದು ವಿಷಯದಲ್ಲಿಯೂ ಸಂಪೂರ್ಣಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ದೆವಾಚೊ ತಾಂಡೊ ಕ್ರಿಸ್ತಾಚೆ ಆಂಗ್ ಹೊವ್ನ್ ಹಾಯ್, ತೆಕಾ ಸಗ್ಳ್ಯಾಂಚ್ಯಾ ವೈರ್ ಟಕ್ಲೆ ಕರುನ್ ಥವ್ಲ್ಯಾನ್ ತೆಜಿ ಪರಿಪುರ್ನತಾ ತೊ ಅಪ್ಲ್ಯಾ ಅಪ್ನಿಚ್ ಸಗ್ಳ್ಯಾಕ್ಡೆ ಸಗ್ಳ್ಯಾ ವಿಶಯಾತ್ ಫುರಾ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:23
19 ತಿಳಿವುಗಳ ಹೋಲಿಕೆ  

ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಪಡೆದೆವು.


ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.


ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.


ಇಳಿದು ಬಂದ ಅವರೇ ಮೇಲಣ ಎಲ್ಲಾ ಆಕಾಶಗಳಿಗಿಂತ ಉನ್ನತವಾಗಿ ಏರಿಹೋಗಿ, ಇಡೀ ವಿಶ್ವವನ್ನೇ ತುಂಬಿಕೊಳ್ಳುವುದಕ್ಕಾಗಿ ಮೇಲೆ ಏರಿ ಹೋಗಿದ್ದಾರೆ.


ಸಮಸ್ತವೂ ಅವರಿಗೆ ಅಧೀನವಾದ ಮೇಲೆ, ಮಗನೂ ಸಹ ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟ ದೇವರಿಗೆ ತಾವೇ ಅಧೀನರಾಗುವರು. ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು.


ಕಾರ್ಯರೀತಿಗಳಲ್ಲಿ ಬೇರೆ ಬೇರೆ ವಿಧಗಳಿವೆ, ಎಲ್ಲರಲ್ಲಿಯೂ ಎಲ್ಲಾ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬರೇ.


ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ.


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು.


ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು