Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:4 - ಕನ್ನಡ ಸಮಕಾಲಿಕ ಅನುವಾದ

4 ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜಗ್ ರಚುನ್ ಹೊವ್ಚ್ಯಾ ಅದ್ದಿಚ್ ಅಮಿ ದೆವಾಚ್ಯಾ ಇದ್ರಾಕ್ ಪವಿತ್ರ್ ಅನಿ ಚುಕ್ ನಸಲ್ಲೆ ಹೊವ್ನ್ ರ್‍ಹಾವ್ಕ್ ಸಾಟ್ನಿ, ದೆವಾನ್ ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾತ್ ತೆನಿ ಅದ್ದಿಚ್ ಅಮ್ಕಾ ಎಚುನ್ ಘೆಟ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಹ್ಯೊ ತೆಚೊ ಪ್ರೆಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:4
55 ತಿಳಿವುಗಳ ಹೋಲಿಕೆ  

ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.


ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.


ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.


ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ನಮ್ಮ ಪ್ರೀತಿಯು ನಿಮ್ಮ ಕಡೆಗೆ ಸಮೃದ್ಧಿಯಾಗಿರುವಂತೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ತುಂಬಿರುವಂತೆ ಕರ್ತ ಯೇಸು ನಿಮಗೆ ಅನುಗ್ರಹಿಸಲಿ.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಎಂದು ನಿತ್ಯತ್ವವನ್ನು ತಿಳಿದಿರುವವರೂ ಇವುಗಳನ್ನೆಲ್ಲಾ ಮಾಡುವವರೂ ಆಗಿರುವ ದೇವರು ಹೇಳುತ್ತಾರೆ.


“ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.


“ ‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು, ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು