Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:5 - ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5-6 ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಮೇಲಿನ ಪ್ರೀತಿಯಿಂದ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ಆತನು ಆಗಲೇ ನಿರ್ಧರಿಸಿದ್ದನು. ಅದು ಆತನ ಚಿತ್ತವಾಗಿತ್ತು ಮತ್ತು ಆತನಿಗೆ ಮೆಚ್ಚಿಕೆಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮ್ಚ್ಯಾ ವರ್ತಿ ಹೊತ್ತ್ಯಾ ಪ್ರೆಮಾ ಸಾಟ್ನಿ ಕ್ರಿಸ್ತ್ ಜೆಜು ವೈನಾ ಅಮ್ಕಾ ಅಪ್ಲಿ ಸ್ವತಾಚಿ ಪೊರಾ ಕರುನ್ ಘೆವ್ಕ್ ತೆನಿ ಅದ್ದಿಚ್ ನಿರ್ದಾರ್ ಕರಲ್ಯಾನ್, ತಿ ತೆಜಿ ಇಚ್ಚ್ಯಾ ಅನಿ ಉದ್ದೆಸ್ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:5
32 ತಿಳಿವುಗಳ ಹೋಲಿಕೆ  

ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.


ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.


ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.


ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.


ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.


ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.


ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ,” ಎಂದು ಹೇಳಿದರು.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,


ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.


ಈಗಲೂ ನನಗೆ, ‘ನನ್ನ ತಂದೆಯೇ, ನನ್ನ ಯೌವನದ ಸ್ನೇಹಿತನು ನೀನೇ,’ ಎಂದು ನೀನು ಕರೆಯುತ್ತಿರುವೆ.


“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.


ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.


ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು