Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:17 - ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ಕ್ರಿಸ್ತ ಯೇಸುವು ಬಂದು ದೂರವಾಗಿದ್ದ ನಿಮಗೂ ಸಮೀಪವಾಗಿದ್ದ ನಮಗೂ ಸಮಾಧಾನವನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಸಮಾಧಾನವನ್ನು ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾಕ್ನಾ ಧುರ್ ಹೊತ್ತ್ಯಾ ಜುದೆವ್ ನ್ಹಯ್ ಹೊತ್ತ್ಯಾನು ತುಮ್ಕಾ ಅನಿ ದೆವಾಕ್ಡೆ ಜಗೊಳ್ ಹೊತ್ತ್ಯಾ ಜುದೆವಾನು ತುಮ್ಕಾ ಸಗ್ಳ್ಯಾಕ್ನಿ ಕ್ರಿಸ್ತಾನ್ ಯೆವ್ನ್ ಸಮಾಧಾನಾಚಿ ಬರಿ ಖಬರ್ ಪರ್ಗಟ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:17
22 ತಿಳಿವುಗಳ ಹೋಲಿಕೆ  

ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.


ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು?


ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.


ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.


ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ.


ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.


ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?


ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು.


“ಒಬ್ಬ ಸ್ತ್ರೀಯು ತನ್ನ ಬಳಿ ಹತ್ತು ಬೆಳ್ಳಿಯ ನಾಣ್ಯವಿರಲಾಗಿ, ಒಂದು ನಾಣ್ಯವನ್ನು ಕಳೆದುಕೊಂಡರೆ, ಅವಳು ದೀಪಹಚ್ಚಿ ಮನೆಯನ್ನು ಗುಡಿಸಿ, ಅದು ಸಿಕ್ಕುವವರೆಗೆ ಜಾಗ್ರತೆಯಿಂದ ಹುಡುಕುವುದಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು