Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:18 - ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೌದು, ಕ್ರಿಸ್ತನ ಮೂಲಕ ನಾವೆಲ್ಲರೂ ಒಬ್ಬ ಆತ್ಮನಿಂದ ನಮ್ಮ ತಂದೆಯಾದ ದೇವರ ಬಳಿಗೆ ಬರಲು ಶಕ್ತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕ್ರಿಸ್ತಾಚ್ಯಾ ವಾಂಗ್ಡಾ ಜುದೆವಾ ಅನಿ ಜುದೆವ್ ನ್ಹಯ್ ಅಸಲ್ಲೆ ಅಮಿ ಸಗ್ಳೆ ಜಾನಾ ಎಕ್ ಆತ್ಮ್ಯಾಕ್ಡೆ ಅನಿ ದೆವ್ ಬಾಬಾಚ್ಯಾ ಇದ್ರಾಕ್ ಯೆಯ್ ಸಾರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:18
26 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.


ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.


ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.


ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.


ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ಅದೇ ನಾಲಿಗೆಯಿಂದ ನಮ್ಮ ತಂದೆಯಾದ ಕರ್ತದೇವರನ್ನು ಕೊಂಡಾಡುತ್ತೇವೆ, ಅದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಸೃಷ್ಟಿಸಲಾದ ಮನುಷ್ಯರನ್ನು ನಾವು ಶಪಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು