Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:20 - ಕನ್ನಡ ಸಮಕಾಲಿಕ ಅನುವಾದ

20 ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತುಮ್ಕಾಬಿ ಅಪೊಸ್ತಲಾನಿ ಅನಿ ಪ್ರವಾದಿಯಾನಿ ಘಾಟಲ್ಲ್ಯಾ ಪಾಯಾ ವೈರ್ ಕ್ರಿಸ್ತ್ ಜೆಜುಕ್ ಮಹತ್ವಾಚೊ ಗುಂಡೊ ಕರುನ್ ಭಾಂದೆಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:20
20 ತಿಳಿವುಗಳ ಹೋಲಿಕೆ  

ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.


ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ.


ಆ ಕುಲದಿಂದಲೇ ಮೂಲೆಗಲ್ಲೂ, ಗುಡಾರದ ಮೊಳೆಯೂ, ಯುದ್ಧದ ಬಿಲ್ಲೂ, ಸಕಲ ಅಧಿಕಾರಿಗಳೂ ಕೂಡಿಕೊಂಡು ಹೊರಬರುವರು.


ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ಅದರ ಮೇಲೆ ಕೆತ್ತಿದ ಕಲ್ಲುಗಳ ಅಳತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ, ದೇವದಾರು ತೊಲೆಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು