Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:3 - ಕನ್ನಡ ಸಮಕಾಲಿಕ ಅನುವಾದ

3 ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅದ್ದಿ ಅಮಿ ಸಗ್ಳ್ಯೆಬಿ ತ್ಯಾ ಲೊಕಾಂಚ್ಯಾ ಸಾರ್ಕೆಚ್ ಅಮ್ಚ್ಯಾ ಸ್ವಾಭಾವಿಕ್ ಆಶ್ಯಾ ಸಾರ್ಕೆ ಚಲುಲಾಗಲಾಂವ್, ಅಮ್ಚ್ಯಾ ಮನಾನ್ ಅನಿ ಆಂಗಾಕ್ ಕಾಯ್ ಪಾಜೆ ಹೊಲ್ಲೆ ಹಾಯ್ ತೆ ಕರುಲಾಗಲಾಂವ್, ಅಮ್ಚ್ಯಾ ತ್ಯಾ ಸ್ವಾಭಾವಿಕ್ ಹಂತಾಕ್ ಅಮಿ ಸಗ್ಳ್ಯಾಂಚ್ಯಾ ಸಾರ್ಕೆ ದೆವಾಚ್ಯಾ ರಾಗಾತ್ ಪಡಲೆ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:3
54 ತಿಳಿವುಗಳ ಹೋಲಿಕೆ  

ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ವಿಧೇಯರಾದ ಮಕ್ಕಳಿಗೆ ತಕ್ಕಂತೆ, ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮ್ಮ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರಬೇಡಿರಿ.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ.


ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.


ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ.


ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?


ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?


ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು? ಯಾರೂ ತರಲಾರರು!


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.


ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು.


ತಿರುಗಿ ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯೇ. ಇದು ಕ್ರಿಸ್ತ ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ಸತ್ಯವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.


ದೇವರು ಹಿಂದಿನ ಕಾಲದಲ್ಲಿ, ಆಯಾ ದೇಶಗಳು ತಮ್ಮ ತಮ್ಮ ಮಾರ್ಗಗಳಲ್ಲಿಯೇ ನಡೆಯುವಂತೆ ಬಿಟ್ಟುಬಿಟ್ಟರು.


ಆದಾಮನು ನೂರಮೂವತ್ತು ವರುಷದವನಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ, “ಸೇತ್” ಎಂದು ಹೆಸರಿಟ್ಟನು.


ನಿಯಮವಿಲ್ಲದ ಯೆಹೂದ್ಯರಲ್ಲದವರು ಸ್ವಾಭಾವಿಕವಾಗಿ ನಿಯಮದಲ್ಲಿ ಹೇಳಿದಂತೆ ನಡೆಯುವಾಗ ಅವರಿಗೆ ನಿಯಮವಿಲ್ಲದಿದ್ದರೂ ಅವರ ಅಂತರಂಗವೇ ನಿಯಮವಾಗಿದೆ.


ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ?


ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?


ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ.


ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.


ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು