Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:8 - ಕನ್ನಡ ಸಮಕಾಲಿಕ ಅನುವಾದ

8 ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಂಬಿಕೆಯ ಮೂಲಕ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ವರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ಕುರ್ಪೆಕ್ ಲಾಗುನ್ ವಿಶ್ವಾಸಾಚ್ಯಾ ವೈನಾ ತುಮಿ ಬಚಾವ್ ಹೊಲ್ಯಾಸಿ ಹೆ ತುಮ್ಚ್ಯಾ ಸ್ವತಾಚ್ಯಾ ಬಳಾನ್ ನ್ಹಯ್, ಖರೆ ಹೆ ಎಕ್ ದೆವಾಚೆ ದೆನೆ ಹೊವ್ನ್ ಹಾಯ್, ತಸೆ ಮನುನ್ ಕೊನ್ಬಿ ತೆಚ್ಯಾ ವಿಶಯಾತ್ ಮೊಟೆಪಾನ್ ಬೊಲುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:8
40 ತಿಳಿವುಗಳ ಹೋಲಿಕೆ  

ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.


“ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ಆದರೆ ಯಾರು ಕೃತ್ಯಗಳನ್ನು ಮಾಡದೆ, ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವ ದೇವರಲ್ಲಿ ನಂಬಿಕೆ ಇಡುತ್ತಾರೋ ಅವರ ನಂಬಿಕೆಯೇ ನೀತಿ ಎಂದು ಎಣಿಸಲಾಗುವುದು.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.


ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”


ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.


ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.


ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


ಆದರೆ ನಾವು ರಕ್ಷಣೆ ಹೊಂದಿದ್ದು ನಮ್ಮ ಕರ್ತ ಯೇಸುವಿನ ಕೃಪೆಯಿಂದಲೇ, ಹಾಗೆಯೇ ಅವರೂ ಹೊಂದುವರು ಎಂಬುದು ನಮ್ಮ ನಂಬಿಕೆ,” ಎಂದನು.


ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.


ಒಂದು ಸಾರಿ ಬೆಳಕನ್ನು ಪಡೆದು, ಪರಲೋಕದ ವರವನ್ನು ರುಚಿ ನೋಡಿ, ಪವಿತ್ರಾತ್ಮ ದೇವರ ಪಾಲನ್ನು ಹೊಂದಿ,


“ಆಗ ಐದು ಗಂಟೆಗೆ ಕರೆದವರು ಬಂದಾಗ ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು