Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:14 - ಕನ್ನಡ ಸಮಕಾಲಿಕ ಅನುವಾದ

14-15 ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14-15 ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14-15 ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿಜನವೂ ಹೆಸರು ತೆಗೆದುಕೊಳ್ಳುತ್ತದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ತಂದೆಯ ಮುಂದೆ ಮೊಣಕಾಲೂರಿ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ‍ಹ್ಯಾ ಕಾರಾನಾಕ್ ಲಾಗುನ್ ಮಿಯಾ ಬಾಬಾಚ್ಯಾ ಇದ್ರಾಕ್ ಡೊಗ್ಲಾ ಠೆಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:14
16 ತಿಳಿವುಗಳ ಹೋಲಿಕೆ  

ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.


ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,


ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.


ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.


ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.


ಸೊಲೊಮೋನನು ಈ ಸಮಸ್ತ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಯೆಹೋವ ದೇವರಿಗೆ ಮಾಡಿ ತೀರಿಸಿದ ತರುವಾಯ, ಅವನು ಯೆಹೋವ ದೇವರ ಬಲಿಪೀಠದ ಮುಂದೆ ಮೊಣಕಾಲೂರಿ, ತನ್ನ ಕೈಗಳನ್ನು ಆಕಾಶಕ್ಕೆ ಚಾಚಿದವನಾಗಿ ಎದ್ದು ನಿಂತನು.


ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು