Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:16 - ಕನ್ನಡ ಸಮಕಾಲಿಕ ಅನುವಾದ

16 ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಆ ಶಕ್ತಿಯನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವ್ ಅಪ್ನಾಚ್ಯಾ ಮಹಿಮೆಚ್ಯಾ ಬದಿಕಾತ್ನಾ ತುಮ್ಚ್ಯಾ ಭುತ್ತುರ್ಲಿ ಮನಾ ಘಟ್ ರ್‍ಹಾವ್ಕ್ ಅಪ್ನಾಚ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಬಳ್ ದಿಂವ್ದಿ ಮನುನ್ ಮಿಯಾ ದೆವಾಕ್ಡೆ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:16
28 ತಿಳಿವುಗಳ ಹೋಲಿಕೆ  

ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.


ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.


ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.


ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.


ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.


ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ.


ದೇವರು ಯೆಹೂದ್ಯರೊಳಗಿಂದ ಮಾತ್ರವೇ ಕರೆಯದೆ, ಯೆಹೂದ್ಯರಲ್ಲದವರಿಂದಲೂ ಕರೆದು, ಮಹಿಮೆಗೆಂದು ಮೊದಲೇ ಸಿದ್ಧಮಾಡಿ, ತಮ್ಮ ಕರುಣೆಗೆ ಪಾತ್ರರಾದ ಜನರಿಗೆ ತಮ್ಮ ಮಹಿಮೆಯ ಐಶ್ವರ್ಯವನ್ನು ಪ್ರಕಟಿಸಲು ಇದನ್ನು ಮಾಡಿದರು.


ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.


ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ.


ಆದರೆ, ಆಂತರ್ಯದಲ್ಲಿ ಯೆಹೂದ್ಯನಾಗಿರುವವನೇ ಯೆಹೂದ್ಯನು. ಹಾಗೆಯೇ ಸುನ್ನತಿಯು ಆತ್ಮನಿಂದ ಹೃದಯದಲ್ಲಿ ಆಗುವಂಥದ್ದಾಗಿದೆ. ಇದು ಲಿಖಿತ ನಿಯಮದಿಂದ ಆಗುವಂಥದಲ್ಲ. ಅಂಥವನಿಗೆ ಮೆಚ್ಚುಗೆಯು ಮನುಷ್ಯರಿಂದ ಬರುವಂಥದಲ್ಲ, ದೇವರಿಂದಲೇ ಬರುವಂಥದ್ದಾಗಿದೆ.


ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ.


ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು