Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:3 - ಕನ್ನಡ ಸಮಕಾಲಿಕ ಅನುವಾದ

3 ಅವರು ರಹಸ್ಯವನ್ನು ಪ್ರಕಟನೆಯಿಂದ ನನಗೆ ತಿಳಿಸಿದರೆಂದು ನಾನು ನಿಮಗೆ ಮೊದಲೇ ಸಂಕ್ಷೇಪವಾಗಿ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ತನ್ನ ರಹಸ್ಯವಾದ ಯೋಜನೆಯನ್ನು ನನಗೆ ತಿಳಿಸಿದನು ಮತ್ತು ತೋರಿಸಿದನು. ಇದರ ಬಗ್ಗೆ ನಾನು ಆಗಲೇ ನಿಮಗೆ ಸ್ವಲ್ಪ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾನ್ ಅಪ್ನಾಚಿ ಗುಟ್ಟಾನ್ ಹೊತ್ತಿ ಯೆವ್ಜನ್ ದಾಕ್ವುನ್ ದಿಲ್ಯಾನ್, ಅನಿ ಮಾಕಾ ಕಳಿಸಾರ್ಕೆ ಕರ್ಲ್ಯಾನ್. ಮಿಯಾ ಹೆಚ್ಯಾ ವಿಶಯಾತ್ ಉಲ್ಲಿ ಗೊಸ್ಟಿಯಾ ಲಿವ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:3
23 ತಿಳಿವುಗಳ ಹೋಲಿಕೆ  

ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ.


ಅದನ್ನು ನೀವು ಓದಿದರೆ ಕ್ರಿಸ್ತನ ರಹಸ್ಯದ ಕುರಿತಾಗಿ ನನಗಿರುವ ಒಳನೋಟವನ್ನು ನೀವೇ ಅರ್ಥಮಾಡಿಕೊಳ್ಳುವಿರಿ.


“ನಾನು ಯೆರೂಸಲೇಮಿಗೆ ಹಿಂದಿರುಗಿ ಬಂದು ದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಆತ್ಮಪರವಶನಾದೆನು.


“ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.


ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.


ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.


ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.


ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.


ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು