ಎಫೆಸದವರಿಗೆ 4:17 - ಕನ್ನಡ ಸಮಕಾಲಿಕ ಅನುವಾದ17 ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅಸೆ ರಾತಾನಾ ವಿಶ್ವಾಸಾತ್ ನತ್ತ್ಯಾ ಅನಿ ಕಾಯ್ಬಿ ಫಾಯ್ದ್ಯಾಕ್ ಪಡಿನಸಲ್ಲಿ ಯವ್ಜನಿಯಾ ಕರ್ತಲ್ಯಾ ವಿಶ್ವಾಸಾತ್ ನತ್ತ್ಯಾ ಲೊಕಾಂಚ್ಯಾ ಸಾರ್ಕೆ ಅನಿ ಫಿಡೆ ಜಿವನ್ ಕರಚೆ ನ್ಹಯ್ ಮನುನ್ ಮಿಯಾ ಧನಿಯಾಚ್ಯಾ ನಾವಾನ್ ಮಿಯಾ ಮಾಗ್ತಾ. ಅಧ್ಯಾಯವನ್ನು ನೋಡಿ |
ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.