Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:5 - ಕನ್ನಡ ಸಮಕಾಲಿಕ ಅನುವಾದ

5 ಕರ್ತ ಆಗಿರುವವರು ಒಬ್ಬರೇ, ಒಂದೇ ವಿಶ್ವಾಸ, ದೀಕ್ಷಾಸ್ನಾನವೂ ಒಂದೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಮ್ಮೆಲ್ಲರಿಗೂ ಪ್ರಭು ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಂದೇ ಪದವಿಯನ್ನು ನಿರೀಕ್ಷಿಸುವದಕ್ಕೆ ಕರೆಯಲ್ಪಟ್ಟವರು; ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ಭರವಸವು ಒಂದೇ, ಸ್ನಾನದೀಕ್ಷೆ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಬ್ಬನೇ ಪ್ರಭು, ಒಂದೇ ನಂಬಿಕೆ, ಒಂದೇ ದೀಕ್ಷಾಸ್ನಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ಲೊಚ್ ಧನಿ, ಎಕುಚ್ ವಿಶ್ವಾಸ್, ಅನಿ ಎಕುಚ್ ಬಾಲ್ತಿಮ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:5
28 ತಿಳಿವುಗಳ ಹೋಲಿಕೆ  

ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ಕ್ರಿಸ್ತ ಯೇಸು ವಿಭಾಗವಾಗಿದ್ದಾರೋ? ಪೌಲನು ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ತೆಗೆದುಕೊಂಡಿರುವಿರೋ?


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.


ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಸೇವೆಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಕರ್ತ ಆಗಿರುವವರು ಒಬ್ಬರೇ.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ.


ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ಆದರೆ ಒಬ್ಬ ಮನುಷ್ಯನು, “ನಿನ್ನಲ್ಲಿ ನಂಬಿಕೆಯಿದೆ, ನನ್ನಲ್ಲಿ ಕ್ರಿಯೆಗಳಿವೆ,” ಎಂದು ವಾದಿಸಬಹುದು. ಅಂಥವನಿಗೆ, “ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ರುಜುಪಡಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ರುಜುಪಡಿಸುತ್ತೇನೆ,” ಎಂದು ಹೇಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು