Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:29 - ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತಯೇಸು ಹೀಗೆಯೇ ಕಾಪಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ; ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಸಂರಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಏಕೆಂದರೆ ಯಾವನೂ ತನ್ನ ದೇಹವನ್ನು ದ್ವೇಷಿಸುವುದಿಲ್ಲ. ಪ್ರತಿಯೊಬ್ಬನು ತನ್ನ ದೇಹವನ್ನು ಪೋಷಿಸಿ ಜಾಗ್ರತೆಯಿಂದ ನೋಡಿಕೊಳ್ಳುತ್ತಾನೆ. ಕ್ರಿಸ್ತನು ಸಭೆಗೋಸ್ಕರ ಮಾಡುವಂಥದ್ದು ಅದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್, ಕೊನ್‍ಬಿ ಅಪ್ಲ್ಯಾ ಸ್ವತಾಚ್ಯಾ ಆಂಗಾಕ್ ಕನ್ನಾಬಿ ಕುಸ್ಡೆ ಕರಿನಾ, ಹರ್ ಎಕ್ಲೊಬಿ ಅಪ್ಲ್ಯಾ ಆಂಗಾಕ್ ಬಾಳ್ಗುನ್ ಹುಶ್ಯಾರ್ಕಿನ್ ಬಗುನ್ ಘೆತಾ ಕ್ರಿಸ್ತ್ ಅಪ್ನಾಚ್ಯಾ ಲೊಕಾಂಚ್ಯಾಸಾಟ್ನಿ ಕರ್ತಲೆಬಿ ಹೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:29
13 ತಿಳಿವುಗಳ ಹೋಲಿಕೆ  

“ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.”


ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ.


ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.


ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


ಆಗ ಮನುಷ್ಯನು ಹೀಗೆ ಹೇಳಿದನು: “ಇದು ನನ್ನ ಎಲುಬಿನಿಂದಾದ ಎಲುಬು ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ. ಈಕೆ ನರನಿಂದ ತೆಗೆದಿರುವುದರಿಂದ, ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು.”


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?


ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.


ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು