Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:32 - ಕನ್ನಡ ಸಮಕಾಲಿಕ ಅನುವಾದ

32 ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಾ ಇದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಕ್ರಿಸ್ತಾಕ್ ಅನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಹೊತ್ತ್ಯಾ ಸಮಂದಾಚ್ಯಾ ವಿಶಯಾತ್ ಮಿಯಾ ಬೊಲುಲ್ಲಾ ಗುಟ್ಟ್ ಹೊವ್ನ್ ಹೊತ್ತೆ ಹೆ ಖರೆ ಲೈ ಮುಖ್ಯ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:32
14 ತಿಳಿವುಗಳ ಹೋಲಿಕೆ  

ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ


“ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.”


ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು