Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:8 - ಕನ್ನಡ ಸಮಕಾಲಿಕ ಅನುವಾದ

8 ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೋ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆ ಹೊವ್ನ್, ಉಜ್ವೊಡಾಚೊ ಫಳ್ ಬರೆಪಾನ್ ಕರ್ತಲ್ಯಾತ್, ನಿಯತ್ತಿನ್ ರಾತಲ್ಯಾತ್ ಅನಿ ಖರೆಪಾನಾತ್ ದಿಸುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:8
43 ತಿಳಿವುಗಳ ಹೋಲಿಕೆ  

ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.


ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು.


ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


“ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ.


ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ.


ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”


ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ನಿನಗೆ ನಿಯಮದ ಜ್ಞಾನ ಮತ್ತು ಸತ್ಯವು ಇರುವುದರಿಂದ ನೀನು ಕುರುಡರಿಗೆ ಮಾರ್ಗದರ್ಶಿಯೂ ಕತ್ತಲೆಯಲ್ಲಿರುವವರಿಗೆ ಬೆಳಕೂ


ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.


ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”


ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’ ಕತ್ತಲೆಯಲ್ಲಿರುವವರಿಗೆ, ‘ಬೆಳಕಿಗೆ ಬನ್ನಿರಿ,’ ಎಂದು ಹೇಳಬಹುದು. “ಅವರು ದಾರಿಗಳಲ್ಲಿ ಮೇಯಿಸುವರು. ಅವರ ಎಲ್ಲಾ ಎತ್ತರವಾದ ಪ್ರದೇಶಗಳೂ ಕೂಡ ಅವರಿಗೆ ಹುಲ್ಲುಗಾವಲಾಗಿರುವುವು.


ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.


ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ಒಡಂಬಡಿಕೆಗೆ ಗೌರವವನ್ನು ಕೊಡಿರಿ. ಏಕೆಂದರೆ ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿ ಇವೆ.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.


ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.


ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು