Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:2 - ಕನ್ನಡ ಸಮಕಾಲಿಕ ಅನುವಾದ

2 “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು,” ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ನಿನ್ನ ತಂದೆತಾಯನ್ನು ಗೌರವಿಸು’ ಎಂಬುದು ವಾಗ್ದಾನದಿಂದ ಕೂಡಿದ ಮೊದಲನೆಯ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ - ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.” ಈ ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚ್ಯಾ ಹುಕುಮಾಚ್ಯಾ ಪೈಲೆಚ್ಯಾ ಗೊಸ್ಟಿ ಸಾರ್ಕೆ ತುಮಿ ತುಮ್ಚ್ಯಾ ಬಾಯ್ ಬಾಬಾಕ್ನಿ ಮಾನ್ ದಿವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:2
13 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆನ್ನುತ್ತಾರೆ: ನೀವು ನಿಮ್ಮ ಪೂರ್ವಜನಾದ ಯೆಹೋನಾದಾಬನ ಅಪ್ಪಣೆಯನ್ನು ಕೇಳಿ, ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ


ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.


ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.


ಮನೆ ಕಟ್ಟಬೇಡಿರಿ, ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷಿತೋಟವನ್ನು ನೆಡಬೇಡಿರಿ, ಅಂಥದ್ದು ನಿಮಗಿರಬಾರದು. ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿವಸಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.


“ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ.”


ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು