Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:1 - ಕನ್ನಡ ಸಮಕಾಲಿಕ ಅನುವಾದ

1 ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:1
10 ತಿಳಿವುಗಳ ಹೋಲಿಕೆ  

ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಆದ ದಾರ್ಯಾವೆಷನ ಆಳ್ವಿಕೆಯ ಪ್ರಥಮ ವರ್ಷದಲ್ಲಿ ಬಾಬಿಲೋನ್ ರಾಜ್ಯದ ಮೇಲೆ ಅಧಿಕಾರಿಯಾಗಿದ್ದಾಗ,


ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು.


ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.


ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು.


ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ,


ಕೂಷ್ ನದಿಯ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ!


ರೂಪವತಿಯಾರಾದ ಸಮಸ್ತ ಕನ್ಯೆಯರು ರಾಜಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿಕಾರಿಗಳಾದ ಹೇಗೈ ಎಂಬವನ ವಶಕ್ಕೆ ಒಪ್ಪಿಸಲಿ. ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರಿಗಳನ್ನು ನೇಮಿಸಲಿ. ಹೇಗೈ ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು ಕೊಡಲಿ.


ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.


ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು