ಎಸ್ತೇರಳು 1:13 - ಕನ್ನಡ ಸಮಕಾಲಿಕ ಅನುವಾದ13 ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ವಿಧಿನ್ಯಾಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13-14 ಕಾನೂನು ಮತ್ತು ದಂಡನೆಗಳ ಬಗ್ಗೆ ಪರಿಣಿತರಾಗಿದ್ದ ಮಂತ್ರಿಗಳ ಸಲಹೆ ಕೇಳುವುದು ರಾಜನ ವಾಡಿಕೆಯಾಗಿತ್ತು. ಅದೇ ಪ್ರಕಾರ ರಾಜನು ತನ್ನ ಸಲಹೆಗಾರರೊಂದಿಗೆ ಈ ವಿಷಯವನ್ನು ಆಲೋಚಿಸಿದನು. ಇವರು ರಾಜನಿಗೆ ನಿಕಟವರ್ತಿಗಳಾಗಿದ್ದರು. ಅವರು ಯಾರೆಂದರೆ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷಿಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಮೇದ್ಯ, ಪಾರಸಿಯ ಪ್ರಮುಖ ಅಧಿಕಾರಿಗಳು. ಅಧ್ಯಾಯವನ್ನು ನೋಡಿ |