Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:18 - ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ರಾಣಿಯರೆಲ್ಲರೂ ಈ ಹೊತ್ತು ಅರಸನ ಶ್ರೇಷ್ಠರಿಗೂ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನ ಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಮತ್ತು ಕೋಪವೂ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಲ್ಲದೆ, ರಾಣಿಯ ಈ ವರ್ತನೆಯ ಬಗ್ಗೆ ಕೇಳಿಸಿಕೊಂಡ ಪರ್ಷಿಯ, ಮೇದ್ಯ ದೇಶಗಳ ಕುಲೀನ ಸ್ತ್ರೀಯರೂ ಇದೇ ರೀತಿ ಅರಸರ ಪದಾಧಿಕಾರಿಗಳೊಂದಿಗೆ ವರ್ತಿಸುವರು. ಹೀಗೆ ತಿರಸ್ಕಾರವೂ ಕೋಪವೂ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಕೋಪವೂ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಪರ್ಶಿಯ ಮತ್ತು ಮೇದ್ಯ ನಾಯಕರುಗಳ ಹೆಂಡತಿಯರು ಸಹ ವಷ್ಟಿರಾಣಿ ಈ ಹೊತ್ತು ಮಾಡಿದ್ದನ್ನು ಕೇಳಿದ್ದಾರೆ. ಅವರು ಸಹ ವಷ್ಟಿರಾಣಿಯ ನಡತೆಯಿಂದ ಪ್ರೋತ್ಸಾಹಿತರಾಗಿ ರಾಜನ ಮುಖ್ಯ ನಾಯಕರುಗಳೊಡನೆ ಅದೇರೀತಿ ವರ್ತಿಸುವರು. ಇದರಿಂದಾಗಿ ಅಗೌರವವೂ ಕೋಪವೂ ತುಂಬಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:18
4 ತಿಳಿವುಗಳ ಹೋಲಿಕೆ  

ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು.


ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಉತ್ತರಕೊಟ್ಟರು. ಅವಳೇ ತನಗೆ ಬದಲು ಮಾತು ಕೇಳಿಕೊಂಡಳು:


ರಾಣಿಯ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬರುವುದು. ‘ಅರಸನಾದ ಅಹಷ್ವೇರೋಷನು ವಷ್ಟಿರಾಣಿಯನ್ನು ತನ್ನ ಮುಂದೆ ಬರಲು ಹೇಳಿ ಕಳುಹಿಸಿದನು. ಆದರೆ ಅವಳು ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಅವರು ತಮ್ಮ ಗಂಡಂದಿರನ್ನೂ ತಿರಸ್ಕರಿಸುವರು.


“ಅರಸನಿಗೆ ಸಮ್ಮತಿಯಾದರೆ, ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯರ ಮತ್ತು ಮೇದ್ಯರ ಕಾನೂನುಗಳಲ್ಲಿ ಲಿಖಿತವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು