Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:2 - ಕನ್ನಡ ಸಮಕಾಲಿಕ ಅನುವಾದ

2 ಆ ದಿವಸಗಳಲ್ಲಿ ಅರಸನಾದ ಅಹಷ್ವೇರೋಷನು ರಾಜಧಾನಿಯಾದ ಶೂಷನಿನಲ್ಲಿ ಅರಮನೆಯಲ್ಲಿರುವ ತನ್ನ ರಾಜಸಿಂಹಾಸನದ ಮೇಲೆ ಕುಳಿತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ತನ್ನ ರಾಜಧಾನಿಯಾಗಿದ್ದ ಶೂಷನ್ ನಗರದಲ್ಲಿ ರಾಜಸಿಂಹಾಸನವನ್ನೇರಿ ಆಡಳಿತ ನಡೆಸುತ್ತಿದ್ದ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಉನ್ನತ ಅಧಿಕಾರಿಗಳಿಗೂ ಪರಿವಾರದವರಿಗೂ ಒಂದು ಔತಣವನ್ನೇರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಹಷ್ವೇರೋಷನು ತನ್ನ ಆಳಿಕೆಯ ಮೂರನೆಯ ವರುಷ ಶೂಷನ್ ಕೋಟೆಯಲ್ಲಿನ ತನ್ನ ರಾಜಸಿಂಹಾಸನವನ್ನೇರಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನ ರಾಜ್ಯದ ರಾಜಧಾನಿ ನಗರವಾಗಿದ್ದ ಶೂಷನ್‌ನಲ್ಲಿಯ ಸಿಂಹಾಸನದಿಂದ ಅರಸನು ರಾಜ್ಯವಾಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:2
10 ತಿಳಿವುಗಳ ಹೋಲಿಕೆ  

ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ, ಕಿಸ್ಲೇವ್ ಎಂಬ ಮಾರ್ಗಶಿರ ತಿಂಗಳಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆನು.


ಯೆಹೋವ ದೇವರು ಅರಸನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅರಸನು ವಿಶ್ರಾಂತಿಯಿಂದ ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ,


ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.


ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.


ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.


ರೂಪವತಿಯಾರಾದ ಸಮಸ್ತ ಕನ್ಯೆಯರು ರಾಜಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿಕಾರಿಗಳಾದ ಹೇಗೈ ಎಂಬವನ ವಶಕ್ಕೆ ಒಪ್ಪಿಸಲಿ. ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರಿಗಳನ್ನು ನೇಮಿಸಲಿ. ಹೇಗೈ ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು ಕೊಡಲಿ.


ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು