ಎಸ್ತೇರಳು 1:20 - ಕನ್ನಡ ಸಮಕಾಲಿಕ ಅನುವಾದ20 ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲ ಗೊತ್ತಾದಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರವರೆಗೂ ತಮ್ಮ ಗಂಡಂದಿರಿಗೆ ಗೌರವಕೊಡುವರು,” ಎಂದು ಸಲಹೆ ನೀಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅರಸರ ಈ ನಿರ್ಣಯವು ತಮ್ಮ ಹಿರಿಯರಿಂದ ಹಿಡಿದು ಕಿರಿಯರವರೆಗೂ ಎಲ್ಲಾ ಮಹಿಳೆಯರು ತಮ್ಮ ಗಂಡಂದಿರೊಂದಿಗೆ ಗೌರವದಿಂದ ವರ್ತಿಸುವರು,” ಎಂದು ಸಲಹೆ ನೀಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಮಾನ ಸಲ್ಲಿಸುವರು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ರಾಜಶಾಸನವು ವಿಶಾಲ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಪ್ರಕಟಿಸಲ್ಪಟ್ಟಾಗ ಎಲ್ಲಾ ಹೆಂಡತಿಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು. ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು.” ಅಧ್ಯಾಯವನ್ನು ನೋಡಿ |