ಎಸ್ತೇರಳು 1:7 - ಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ನಾನಾ ವಿಧವಾದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವನ್ನು ಧಾರಾಳವಾಗಿ ಕುಡಿಯಲು ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನಾ ಆಕಾರದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿ ದ್ರಾಕ್ಷಾರಸವನ್ನು ಕುಡಿಯಲು ಕೊಡುವ ವ್ಯವಸ್ಥೆ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪಾನಪಾತ್ರೆಗಳು ಬಂಗಾರದವುಗಳೂ ನಾನಾ ಆಕಾರದವುಗಳೂ ಆಗಿದ್ದವು. ರಾಜದ್ರಾಕ್ಷಾರಸವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅತಿಥಿಗಳಿಗೆ ಬಂಗಾರದ ಪಾನಪಾತ್ರೆಯಲ್ಲಿ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಬೇರೆಬೇರೆ ವಿಧದ ಪಾತ್ರೆಗಳನ್ನು ಉಪಯೋಗಿಸಲಾಗಿತ್ತು. ರಾಜನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವು ಧಾರಾಳವಾಗಿ ಹಂಚಲ್ಪಡುತ್ತಿತ್ತು. ಅಧ್ಯಾಯವನ್ನು ನೋಡಿ |