Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ಎಸ್ತೇರಳು ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ತಿಳಿಸಲಿಲ್ಲ. ಏಕೆಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬುದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತನ್ನ ಸ್ವಜನರ ಹಾಗು ಬಂಧುಬಳಗದವರ ಬಗ್ಗೆ ಎಸ್ತೇರಳು ಯಾರಿಗೂ ತಿಳಿಸಿರಲಿಲ್ಲ. ತಿಳಿಸಬಾರದೆಂದು ಮೊರ್ದೆಕೈ ವಿಧಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಾನು ಯೆಹೂದ್ಯಳು ಎಂದು ಎಸ್ತೇರಳು ಯಾರಿಗೂ ಹೇಳಲಿಲ್ಲ. ತನ್ನ ವಂಶ, ಮನೆತನದ ವಿಚಾರವಾಗಿಯೂ ಯಾರಿಗೂ ತಿಳಿಸಲಿಲ್ಲ. ಯಾಕೆಂದರೆ ಮೊರ್ದೆಕೈ ಆಕೆಗೆ ತನ್ನ ವಿಷಯವಾಗಿ ಯಾರಿಗೂ ಹೇಳಬಾರದೆಂದೂ ಕಟ್ಟಪ್ಪಣೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:10
9 ತಿಳಿವುಗಳ ಹೋಲಿಕೆ  

“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಎಸ್ತೇರಳು ಮೊರ್ದೆಕೈಯು ತನಗೆ ಆಜ್ಞಾಪಿಸಿದ ಹಾಗೆ ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ಯಾರಿಗೂ ತಿಳಿಸಿರಲಿಲ್ಲ. ಏಕೆಂದರೆ ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಆಕೆ ಅವನ ಆಜ್ಞೆಯನ್ನು ಕೈಕೊಂಡು ನಡೆದಂತೆಯೇ ಈಗಲೂ ಅವನ ಆಜ್ಞೆಯನ್ನು ಪಾಲಿಸುತ್ತಿದ್ದಳು.


ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು.


ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.


ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.


ಇವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರ್ ಎಂಬ ಹೆಸರನ್ನು ಪಡೆದ ಹದೆಸ್ಸಳನ್ನು ಸಾಕುತ್ತಿದ್ದನು. ಏಕೆಂದರೆ ಅವಳಿಗೆ ತಂದೆತಾಯಿಗಳು ಇರಲಿಲ್ಲ. ಈಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆತಾಯಿಗಳು ಸತ್ತು ಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದ್ದನು.


ಆದರೆ ಎಸ್ತೇರಳ ಕ್ಷೇಮವನ್ನೂ, ಅವಳಿಗೆ ಆಗುವಂಥಾದ್ದನ್ನೂ ತಿಳಿದುಕೊಳ್ಳುವುದಕ್ಕೆ ಮೊರ್ದೆಕೈ ಪ್ರತಿದಿನವೂ ಸ್ತ್ರೀಯರಿದ್ದ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.


ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು