Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನ ವಂಶಸ್ಥನೂ ಹಮ್ಮೆದಾತನ ಮಗನೂ ಆದ ಹಾಮಾನನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ಕೇಳಿದ ಅರಸನು ತನ್ನ ಕೈಬೆರಳಿನಲ್ಲಿದ್ದ ಮುದ್ರೆ ಉಂಗುರವನ್ನು ತೆಗೆದು ಆಗಾಗನ ವಂಶಸ್ಥನೂ ಹೆಮ್ಮೆದಾತನ ಮಗನೂ ಯೆಹೂದ್ಯರ ಕಡುವೈರಿಯೂ ಆದ ಹಾಮಾನನಿಗೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:10
7 ತಿಳಿವುಗಳ ಹೋಲಿಕೆ  

ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.


ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.


ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.


ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು.


ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.


ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು.


ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು