ಎಸ್ತೇರಳು 3:11 - ಕನ್ನಡ ಸಮಕಾಲಿಕ ಅನುವಾದ11 ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆ ಬೆಳ್ಳಿ ನಿನ್ನಲ್ಲೇ ಇರಲಿ: ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅರಸನು ಹಾಮಾನನಿಗೆ, “ನಿನ್ನ ಹಣವು ನಿನ್ನ ಹತ್ರವೇ ಇರಲಿ. ಆ ಜನರನ್ನು ನಿನಗೆ ಇಷ್ಟಬಂದ ಹಾಗೆ ಮಾಡಬಹುದು” ಅಂದನು. ಅಧ್ಯಾಯವನ್ನು ನೋಡಿ |
ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.
ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.