Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:12 - ಕನ್ನಡ ಸಮಕಾಲಿಕ ಅನುವಾದ

12 ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೊದಲನೇ ತಿಂಗಳ ಹದಿಮೂರನೆಯ ದಿನ ರಾಜಲೇಖಕರನ್ನು ಕರೆಸಲಾಯಿತು. ಇವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಾಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಅವರವರ ಸ್ವದೇಶಿ ಲಿಪಿಗಳಲ್ಲೂ ಭಾಷೆಗಳಲ್ಲೂ ಬರೆದರು. ಅರಸ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾದ ಈ ಪತ್ರಗಳು ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:12
12 ತಿಳಿವುಗಳ ಹೋಲಿಕೆ  

ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.


ಪ್ರತಿಯೊಂದು ಕುಟುಂಬದಲ್ಲಿಯೂ ಪುರುಷನೇ ಅಧಿಕಾರ ನಡೆಸಬೇಕೆಂದೂ, ತನ್ನ ಸ್ವಜನರ ಭಾಷೆಯಲ್ಲಿಯೇ ವ್ಯವಹಾರ ನಡೆಸಬೇಕೆಂದೂ ಪ್ರಾಂತಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲಿ ಅರಸನು ಸಮಸ್ತ ಸಂಸ್ಥಾನಗಳಿಗೂ ಪತ್ರಗಳನ್ನು ಬರೆದು ಕಳುಹಿಸಿದನು.


ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು.


ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.


ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.


ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.


ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.


ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು.


ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು.


ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.


ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು