Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:15 - ಕನ್ನಡ ಸಮಕಾಲಿಕ ಅನುವಾದ

15 ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:15
14 ತಿಳಿವುಗಳ ಹೋಲಿಕೆ  

ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅತ್ತು ಗೋಳಾಡುವಿರಿ. ಆದರೆ ಲೋಕವು ಸಂತೋಷಿಸುವುದು; ನೀವು ದುಃಖಿಸುವಿರಿ ಆದರೆ ನಿಮ್ಮ ದುಃಖವು ಆನಂದವಾಗಿ ಮಾರ್ಪಡುವುದು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ.


ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುತ್ತಾರೆ. ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.


ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.


ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.


ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.


ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.


ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.


ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.


ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು