Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:4 - ಕನ್ನಡ ಸಮಕಾಲಿಕ ಅನುವಾದ

4 ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಅವರಿಗೆ ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ನಡವಳಿಕೆಯನ್ನು ಸಹಿಸಬಹುದೋ ಎಂದು ಕಾಣಲು ಅವರು ಹಾಮಾನನಿಗೆ ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ಹಟವು ಎಲ್ಲಿಯವರೆಗೆ ಸಾಗುವುದೊ ನೋಡಿಯೇ ಬಿಡಬೇಕೆಂದು ಅವನ ಈ ವರ್ತನೆಯ ಬಗ್ಗೆ ಹಾಮಾನನಿಗೆ ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಿನಂಪ್ರತಿ ಅವನನ್ನು ಎಚ್ಚರಿಸಿದರೂ ಅವನು ಮಣಿಯಲಿಲ್ಲ. ಆದದರಿಂದ ಅವರು - ತಾನು ಯೆಹೂದ್ಯನೆನ್ನುವ ಮೊರ್ದೆಕೈಯ ಹೆಮ್ಮೆಯ ಹಟವು ಸಾಗುವದೇನೋ ನೋಡೋಣ ಎಂದುಕೊಂಡು ಅದನ್ನು ಹಾಮಾನನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿದಿನ ಆ ಅಧಿಕಾರಿಗಳು ಮೊರ್ದೆಕೈಗೆ ಹೇಳಿದರೂ ಅವನು ಹಾಮಾನನಿಗೆ ಅಡ್ಡಬೀಳಲೂ ಇಲ್ಲ, ಗೌರವಿಸಲೂ ಇಲ್ಲ. ಈ ವಿಷಯವನ್ನು ಅಧಿಕಾರಿಗಳು ಹಾಮಾನನಿಗೆ ತಿಳಿಸಿದರು. ಮೊರ್ದೆಕೈಗೆ ಹಾಮಾನನು ಮಾಡುವದನ್ನು ನೋಡಲು ಕಾದಿದ್ದರು. ಮೊರ್ದೆಕೈ ಅವರಿಗೆ ತಾನು ಯೆಹೂದ್ಯನೆಂದು ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:4
11 ತಿಳಿವುಗಳ ಹೋಲಿಕೆ  

ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದರೂ, ಅವನು ಅವಳ ಕೂಡ ಮಲಗುವುದಕ್ಕಾಗಲಿ, ಅವಳ ಹತ್ತಿರ ಇರುವುದಕ್ಕಾಗಲಿ ಒಪ್ಪಲಿಲ್ಲ.


ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.


ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.


ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!


ಆಗ ಅರಮನೆಯ ಬಾಗಿಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ, “ನೀನು ಅರಸನ ಆಜ್ಞೆಯನ್ನು ಮೀರುವುದೇನು?” ಎಂದರು.


ಹಾಮಾನನು, ಮೊರ್ದೆಕೈಯು ತನಗೆ ಬಗ್ಗಿ ಅಡ್ಡಬೀಳದೆ ಇರುವುದನ್ನು ಕಂಡಾಗ ಬಹು ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು