Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:8
25 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.


“ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.


ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?


ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”


“ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’


“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


“ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು.


ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.


ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ,


ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು.


ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು


ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.


ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.


ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು.


ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು