Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:3 - ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದ ಸಂಸ್ಥಾನಗಳಲ್ಲೆಲ್ಲಾ ಯೆಹೂದ್ಯರೊಳಗೆ ಅತೀವ ದುಃಖವುಂಟಾಗಿ ಅನೇಕರು ಉಪವಾಸ ಕೈಗೊಂಡರು. ರೋದನ-ಆಕ್ರಂದನಗಳೊಡನೆ ಗೋಣಿತಟ್ಟನ್ನು ಹೊದ್ದು ಬೂದಿಯಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:3
20 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.


ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.


ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ ಉಪವಾಸ ಎನ್ನುತ್ತೀರೋ?


ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”


ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.


“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.


ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.


ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.


ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.


ಅವನು ಅರಸನ ಅರಮನೆಯ ಬಾಗಿಲಿನವರೆಗೆ ಬಂದನು. ಏಕೆಂದರೆ ಗೋಣಿತಟ್ಟನ್ನು ಉಟ್ಟುಕೊಂಡು ಅರಸನ ಅರಮನೆಯ ಬಾಗಿಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.


ಆಗ ಎಸ್ತೇರಳ ದಾಸಿಯರೂ ಅವಳ ಕಂಚುಕಿಯರೂ ಬಂದು ಮೊರ್ದೆಕೈ ಬಗ್ಗೆ ಅವಳಿಗೆ ತಿಳಿಸಿದರು. ಆದ್ದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆಕೈಯು ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಉಡುಪನ್ನು ಕಳುಹಿಸಿಕೊಟ್ಟಳು. ಆದರೆ ಅವನು ಅದನ್ನು ತೆಗೆದುಕೊಳ್ಳಲಿಲ್ಲ.


ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು.


ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿ,


ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು