ಎಸ್ತೇರಳು 4:4 - ಕನ್ನಡ ಸಮಕಾಲಿಕ ಅನುವಾದ4 ಆಗ ಎಸ್ತೇರಳ ದಾಸಿಯರೂ ಅವಳ ಕಂಚುಕಿಯರೂ ಬಂದು ಮೊರ್ದೆಕೈ ಬಗ್ಗೆ ಅವಳಿಗೆ ತಿಳಿಸಿದರು. ಆದ್ದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆಕೈಯು ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಉಡುಪನ್ನು ಕಳುಹಿಸಿಕೊಟ್ಟಳು. ಆದರೆ ಅವನು ಅದನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಎಸ್ತೇರಳ ದಾಸಿಯರೂ ಕಂಚುಕಿಗಳೂ ಈ ವಿಷಯವನ್ನು ಆಕೆಗೆ ತಿಳಿಸಿದಾಗ ಆಕೆ ಬಹು ವ್ಯಸನಾಕ್ರಾಂತಳಾದಳು. ಉಟ್ಟ ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಮೊರ್ದೆಕೈಗೆ ಉಡುಪನ್ನು ಕಳುಹಿಸಿಕೊಟ್ಟಳು. ಅವನಾದರೋ ಅವುಗಳನ್ನು ಸ್ವೀಕರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಅದನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ - ಗೋಣಿತಟ್ಟನ್ನು ತೆಗೆದುಬಿಟ್ಟು ಇವುಗಳನ್ನು ಧರಿಸಿಕೋ ಎಂದು ಹೇಳಿಸಿದಳು; ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಎಸ್ತೇರಳ ಸೇವಕಿಯರು ಮತ್ತು ಕಂಚುಕಿಯರು ಮೊರ್ದೆಕೈ ವಿಚಾರವಾಗಿ ಆಕೆಗೆ ತಿಳಿಸಿದರು. ಇದನ್ನು ಕೇಳಿ ಎಸ್ತೇರ್ ರಾಣಿಗೆ ತುಂಬಾ ಗಲಿಬಿಲಿಯೂ ದುಃಖವೂ ಆಯಿತು. ಆಕೆ ಅವನಿಗೋಸ್ಕರ ಬಟ್ಟೆಗಳನ್ನು ಕಳುಹಿಸಿ ಶೋಕದ ಬಟ್ಟೆಯನ್ನು ತೆಗೆದುಹಾಕಲು ಹೇಳಿಸಿದಳು. ಆದರೆ ಅವನು ಅವಳ ಬಟ್ಟೆಗಳನ್ನು ಸ್ವೀಕರಿಸಲಿಲ್ಲ. ಅಧ್ಯಾಯವನ್ನು ನೋಡಿ |